ಹಿಂದುಳಿದ ವರ್ಗದವರ ಗಮನಕ್ಕೆ; ಭಾರತೀಯ ಸೇನೆ ಸೇರುವುದಕ್ಕೆ ಮಾರ್ಗದರ್ಶನ ಮತ್ತು ತರಬೇತಿಗೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗದವರ ಗಮನಕ್ಕೆ; ಭಾರತೀಯ ಸೇನೆ ಸೇರುವುದಕ್ಕೆ ಮಾರ್ಗದರ್ಶನ ಮತ್ತು ತರಬೇತಿಗೆ ಅರ್ಜಿ ಆಹ್ವಾನ

 


 



ಮಂಗಳೂರು: ಭಾರತದ ಸೇನೆ ಮತ್ತು ಸಶಸ್ತ್ರ ಪಡೆ ಸೇರುವ ಕನಸು ಕಾಣುತ್ತಿರುವ ಹಿಂದುಳಿದ ವರ್ಗದ ಯುವಜನರಿಗೆ ಒಂದು ಶುಭಸುದ್ದಿ. ಭಾರತೀಯ ಸೇನೆ ಅಥವಾ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(), 3() ಹಾಗೂ 3(ಬಿ) ಬಾಲಕರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತ ಊಟ ಮತ್ತು ವಸತಿಯೊಂದಿಗೆ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

 

ಅರ್ಹತೆಗಳು: ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಮಿತಿ (ಪ್ರವರ್ಗ-1)ಕ್ಕೆ 2.50 ಲಕ್ಷ ರೂ. ಹಾಗೂ ಪ್ರವರ್ಗ-2(), 3() ಮತ್ತು 3(ಬಿ) ಗಳಿಗೆ 1.00 ಲಕ್ಷ ರೂಪಾಯಿ.

ವಿದ್ಯಾರ್ಹತೆ: 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತೀ ವಿಷಯದಲ್ಲಿ ಕನಿಷ್ಠ 33 ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಂ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು.

ವಯೋಮಿತಿ: ಜನ್ಮ ದಿನಾಂಕ ಮತ್ತು ವಯಸ್ಸು (10ನೇ ತರಗತಿಯ ಅಂಕ ಪಟ್ಟಿಯಲ್ಲಿರುವಂತೆ) 2023 ಡಿಸೆಂಬರ್ 31 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು. ಅಭ್ಯರ್ಥಿಯು 01 ಜನವರಿ 2003 ರಿಂದ 01 ಜುಲೈ 2006 (17 2/1  ವರ್ಷದಿಂದ 21 ವರ್ಷ) ದಿನಾಂಕಗಳ ನಡುವೆ ಜನಿಸಿರಬೇಕು.

ಅಭ್ಯರ್ಥಿಯ ಎತ್ತರ 166 ಸೆ.ಮೀ, ತೂಕ ಕನಿಷ್ಠ 50 ಕೆ.ಜಿ, ಎದೆಯ ಸುತ್ತಳತೆ 77 ಸೆ.ಮೀ ಹೊಂದಿರಬೇಕು.

ದಕ್ಷಿಣ ಕನ್ನಡ ಜಿಲ್ಲೆ ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ತರಬೇತಿ ಸಿಗಲಿದೆ. 

ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಆನೆಗುಂಡಿ ರಸ್ತೆ, ಬಿಜೈ ಕಾಪಿಕಾಡ್, ಮಂಗಳೂರು ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ-575004- ಇಲ್ಲಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಪ್ಟೆಂಬರ್ 15 ಬೆಳಗ್ಗೆ 10 ರಿಂದ ಸಂಜೆ 5.30 ರೊಳಗೆ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆಗೆ ಇಲಾಖಾ ವೆಬ್-ಸೈಟ್ https://bcwd.karnataka.gov.in ನಿಂದ ಪಡೆಯಬಹುದಾಗಿದೆ ಹಾಗೂ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0824-2225078 ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article