Drought in Karnataka: ಜಂಟಿ ಸಮೀಕ್ಷೆ ವರದಿ ಆಧಾರದ ಅನುಸಾರ ಬರ ಘೋಷಣೆ ತೀರ್ಮಾನಿಸಲಾಗುವುದು – ಕಂದಾಯ ಸಚಿವ ಕೃಷ್ಣಭೈರೇಗೌಡ
Monday, September 4, 2023
ಕಂದಾಯ ಸಚಿವ ಕೃಷ್ಣಭೈರೇಗೌಡ |
ಬೆಂಗಳೂರು: ಕರ್ನಾಟಕದಲ್ಲಿ ಮಂಗಾರು ದುರ್ಬಲಗೊಂಡು, ಜೂನ್ ತಿಂಗಳಿನಲ್ಲಿ ಶೇ 55ರಷ್ಟು ಮಳೆ ಕೊರತೆಯಾಗಿತ್ತು. ನಂತರ ಜುಲೈ ತಂಗಳಿನಲ್ಲಿ ಉತ್ತಮವಾಗಿ ಮಳೆಯಾದರೂ, ಆಗಸ್ಟ್ ತಿಂಗಳಿನಲ್ಲಿ ಶೇಕಡಾ 73 ರಷ್ಟು ಮಳೆ ಕೊರತೆಯಾಗಿದೆ. 2. ಒಟ್ಟಾರೆ ಪ್ರಸಕ್ತ ಮಂಗಾರು ಜೂನ್ 1 ರಿಂದ ಸೆಪ್ಟೆಂಬರ್ 4 ರವರೆಗೆ ವಾಡಿಕೆಯಾಗಿ 711 ಮಿ.ಮಿ. ಮಳೆಯಾಗಬೇಕಿದ್ದು, ವಾಸ್ತವಿಕ 526 ಮಿ.ಮಿ ಮಳೆಯಾಗಿದ್ದು, ಶೇಕಡಾ 26ರಷ್ಟು ಮಳೆ ಕೊರತೆಯಾಗಿದ್ದು, ಬರ ಪರಿಸ್ಥಿತಿ ತಲೆದೋರಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು
.
ಇಂದು ವಿಧಾನಸೌಧದಲ್ಲಿ ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಜರುಗಿದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಪ್ರಕೃತಿ ವಿಕೋಪದಿಂದ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಿ, ಮಾತನಾಡಿದ ಸಚಿವರು, ಬರ ಪರಿಸ್ಥಿತಿ ಬಗ್ಗೆ ನಿಗಾ ಮತ್ತು ನಿರ್ವಹಣೆಗಾಗಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಈವರೆಗೆ 3 ಬಾರಿ ಸಭೆ ನಡೆಸಿ ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ಪರಾಮರ್ಶಿಸಿದೆ. ದಿನಾಂಕ 22-08-2023 ರಂದು ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಕೇಂದ್ರ ಸರ್ಕಾರದ ಕೃಷಿ, ಸಹಕಾರ ಮತ್ತು ರೈತರ ಕಲ್ಯಾಣ ಮಂತ್ರಾಲಯದ ಪರಿಷ್ಕøತ ಬರ ಕೃಪಿಡಿ 2020ರಲ್ಲಿ ಸೂಚಿಸಲಾಗಿರುವ, ಕಡ್ಡಾಯ ಮಾನದಂಡಗಳಾದ, ಮಳೆ ಕೊರತೆ (ಶೇಕಡಾ>60, ಸತತ 3 ವಾರಗಳ ಶುಷ್ಕ ವಾತಾವರಣ ಹಾಗೂ ಇತರೆ ತತ್ಪರಿಣಾಮ ಮಾನದಂಡಗಳ (ಉಪಗ್ರಹ ಆಧಾರತ ಬೆಳೆ ಸೂಚ್ಯಂಕ, ತೇವಾಂಶ ಕೊರತೆ ಹಾಗೂ ಜಲ ಸಂಪನ್ಮೂಲ ಸೂಚ್ಯಂಕ) ಅನ್ವಯ, ರಾಜ್ಯದಲ್ಲಿ ಬರ ಪರಿಸ್ಥಿತಿ ಕಂಡುಬಂದಿರುವ 113 ತಾಲೂಕುಗಳನ್ನು ಕ್ಷೇತ್ರ ಪರಿಶೀಲನೆ ಹಾಗೂ ದೃಢೀಕರಣಕ್ಕಾಗಿ Ground Truthing ಜಂಟಿ ಸಮೀಕ್ಷೆ ಕೈಗೊಂಡು ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿತ್ತು ಎಂದು ತಿಳಿಸಿದರು.

ಆಗಸ್ಟ್ 19ರ ಪ್ರಕಾರ, 113 ತಾಲೂಕುಗಳ ಪೈಕಿ ಜಂಟಿ ಸಮೀಕ್ಷೆಯಲ್ಲಿ ಮಾರ್ಗಸೂಚಿ ಅನ್ವಯ 62 ತಾಲೂಕುಗಳ ಬರ ಘೋಷಣೆಗೆ ಅರ್ಹವಾಗಿದೆ. ಆದರೆ, ಜಂಟಿ ಸಮೀಕ್ಷೆಯ ನಂತರ ಬೆಳೆ ಪರಿಸ್ಥಿತಿ ಮತ್ತೆ ಕುಸಿದಿದೆ ಎಂದು ವರದಿಗಳು ಬಂದಿರುತ್ತವೆ. ಹಾಗಾಗಿ ಉಳಿದ 51 ತಾಲೂಕುಗಳಲ್ಲಿ ಮತ್ತೊಮ್ಮೆ ಜಂಟಿ ಸಮೀಕ್ಷೆಗೆ ಒಳಪಡಿಸಲು ತೀರ್ಮಾನಿಸಿದೆ. ಮುಂದುವರೆದು ದಿನಾಂಕ 02-09-2023 ರ ಅಂತ್ಯಕ್ಕೆ ಅರ್ಹವಾಗಿರುವ 83 ತಾಲೂಕುಗಳಲ್ಲಿ Ground Truthing ಜಿಲ್ಲಾಧಿಕಾರಿಗಳಿಗೆ ಸೂಚಿಸಲು ತೀರ್ಮಾನಿಸಲಾಯಿತು. ಒಟ್ಟಾರೆ 51 ಮತ್ತು 83 ತಾಲೂಕುಗಳಲ್ಲಿ,Ground Truthing ಮುಗಿಸಿ ಒಂದು ವಾರದೊಳಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ ಎಂದು ತಿಳಿಸಿದರು.
134 ತಾಲೂಕುಗಳಲ್ಲಿ ಜಂಟಿ ಸಮೀಕ್ಷೆ ವರದಿ ಆಧಾರದ ಅನುಸಾರ ಬರ ಘೋಷಣೆ ತೀರ್ಮಾನಿಸಲಾಗುವುದು. ಬರ ಘೋಷಣೆಯ ನಂತರ ಕೇಂದ್ರ ಸರ್ಕಾರದ ನೆರವಿಗಾಗಿ ಮನವಿ ಸಲ್ಲಿಸಲು (ಮಮೊರಾಂಡಮ್) ಸಲ್ಲಿಸಲಾಗುವುದು. ಬರ ಘೋಷಣೆ ಯಾದ ದಿನದಿಂದ ವಿಧಾನಸಭಾ ಕ್ಷೇತ್ರದ ಮಟ್ಟದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೆÇೀರ್ಸ್ ರಚಿಸಲು ತೀರ್ಮಾನಿಸಲಾಗಿದೆ.
ಬರ ಘೋಷಣೆ ನಂತರ ಕುಡಿಯುವ ನೀರು ಕೊರತೆ ಕಂಡುಬಂದ ವಸತಿ ಪ್ರದೇಶಗಳಲ್ಲಿ ಟ್ಯಾಂಕರ್ ಮುಖಾಂತರ ಅಥವಾ ಬಾಡಿಗೆ ಬೋರ್ ವೆಲ್ ಮುಖಾಂತರ ತುರ್ತು ಕುಡಿಯುವ ನೀರು ಒದಗಿಸುವ ಖರ್ಚು ವೆಚ್ಚವನ್ನು ಎಸ್ ಡಿಆರ್ ಎಫ್ (SDRF) ಮುಖಾಂತರ ಬರಿಸಲು ಅನುಮತಿಸಿದೆ. ಹಾಲಿ ಮೇವು ಲಭ್ಯವಿದ್ದು ಮುಂದಿನ ದಿನಗಳಲ್ಲಿ ಮೇವಿನ ಕೊರತೆ ನಿಭಾಯಿಸಲು ನೀರಿನ ವ್ಯವಸ್ಥೆ ಇರುವ ರೈತರಿಗೆ ಮೇವು ಬಿತ್ತನೆ ಬೀಜದ ಕಿಟ್ ವಿತರಿಸಲು ಪಶು ಸಂಗೋಪನೆ ಇಲಾಖೆಗೆ 20 ಕೋಟಿ ರೂ ಮೊತ್ತ ವಿತರಿಸಲು ತೀರ್ಮಾನಿಸಲಾಗಿದೆ. ಹಾಗೂ ಎಲ್ಲಾ ತೀರ್ಮಾನಗಳೂ ಸಚಿವ ಸಂಪುಟ ಸಮಿತಿ ನಿರ್ಣಯಕ್ಕೆ ಒಳಪಟ್ಟಿರುತ್ತವೆ ಎಂದು ತಿಳಿಸಿದರು.