ಐ.ಎ.ಎಸ್ ಮತ್ತು ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಐ.ಎ.ಎಸ್ ಮತ್ತು ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ


ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಐಎಎಸ್‌, ಕೆಎಎಸ್ ಪರೀಕ್ಷಾಕಾಂಕ್ಷಿಗಳಿಗೆ ಒಂದು ಶುಭ ಸುದ್ದಿ. 2023-24 ನೇ ಸಾಲಿನಲ್ಲಿ ಐ.ಎ.ಎಸ್ ಮತ್ತು ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ಆಯೋಜಿಸಿದೆ. ಈ ತರಬೇತಿ ಕರ್ನಾಟಕ ಹಜ್‌ ಭವನದಲ್ಲಿ ನಡೆಯಲಿದ್ದು, ಇದಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 25 ರವರೆಗೆ  ವಿಸ್ತರಿಸಲಾಗಿದೆ.

ವಿವಿಧ ಜಿಲ್ಲೆಗಳಿಂದ ಅಭ್ಯರ್ಥಿಗಳ ಕೋರಿಕೆ ಮತ್ತು ಸಹಾಯವಾಣಿಗೆ ಕರೆಗಳು ಬರುತ್ತಿರುವ ಕಾರಣ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.  https://sevasindhu.karnataka.gov.in ಜಾಲತಾಣದ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article