ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಅಹವಾಲುಗಳ ಪರೀಶೀಲನಾ ಅದಾಲತ್ ಪಟ್ಟಿ ಪ್ರಕಟ

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಅಹವಾಲುಗಳ ಪರೀಶೀಲನಾ ಅದಾಲತ್ ಪಟ್ಟಿ ಪ್ರಕಟ

VidhanaSoudha

ಬೆಂಗಳೂರು: ರಾಜ್ಯದ ಎಲ್ಲಾ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ಮತ್ತು ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಗಡಿ ನಿರ್ಣಯ ಕುರಿತಂತೆ, ಸೆಪ್ಟೆಂಬರ್ 19ರ ಒಳಗಾಗಿ ಸಲ್ಲಿಸಲ್ಪಟ್ಟ ಅಹವಾಲುಗಳ ಪರಿಶೀಲನಾ ಅದಾಲತ್ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಗೇಟ್-ನಂ-2, 2ನೇ ಮಹಡಿ, ಕೊಠಡಿ ಸಂಖ್ಯೆ 229, 230, ಬಹುಮಹಡಿಗಳ ಕಟ್ಟಡ, ಬೆಂಗಳೂರು – 560001 ಇಲ್ಲಿ ಸೆಪ್ಟೆಂಬರ್ 25 ರಿಂದ ಅಕ್ಟೋಬರ್ 5ರವರೆಗೆ ಅದಾಲತ್ ನಡೆಯಲಿದೆ.

ಈ ಅದಾಲತ್ ವೇಳಾಪಟ್ಟಿ ಪ್ರಕಟಣೆಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ಆಯೋಗದ ಜಾಲತಾಣ https://rdpr.karnataka.gov.in/rdc/public/   ಮತ್ತು ಜಿಲ್ಲಾಧಿಕಾರಿಗಳ ಕಛೇರಿ ಹಾಗೂ ಆಯಾ ತಾಲೂಕುಗಳ ತಹಶೀಲ್ದಾರ್ ಕಛೇರಿಗಳಲ್ಲಿ ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುತ್ತದೆ.

ಸೆಪ್ಟೆಂಬರ್ 19 ರೊಳಗಾಗಿ ಅಹವಾಲುಗಳನ್ನು ಸಲ್ಲಿಸಿರುವವರು ಅದಾಲತ್‍ನಲ್ಲಿ ಭಾಗವಹಿಸಲು ಇಚ್ಚಿಸಿದಲ್ಲಿ, ಸರ್ಕಾರದಿಂದ ನೀಡಿರುವ ಭಾವಚಿತ್ರವುಳ್ಳ ಗುರುತಿನ ಚೀಟಿಯ ಮೂಲ ಪ್ರತಿಯನ್ನು ಕಡ್ಡಾಯವಾಗಿ ತಮ್ಮೊಂದಿಗೆ ತರುವುದು ಎಂದು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು ಮತ್ತು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದ ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿ ಹಾಗೂ ಸದಸ್ಯ ಕಾರ್ಯದರ್ಶಿ ಡಾ.ಎನ್.ನೋಮೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article