ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಅಹ್ವಾನ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಅಹ್ವಾನ

ಮಂಗಳೂರು: ಕರ್ನಾಟಕದಲ್ಲಿ 2023-24ನೇ ಸಾಲಿನ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಟಿಯನ್, ಸಿಖ್, ಬೌದ್ಧ, ಜೈನ್ ಮತ್ತು ಪಾರ್ಸಿ) ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾರ್ಥಿ ವೇತನಕ್ಕಾಗಿ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in   ನಲ್ಲಿ ನವೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

  ಅರ್ಜಿ ಸಲ್ಲಿಸಿದ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ನಂ. 16 ಸಿ, ಮೌಲಾನಾ ಅಬ್ದುಲ್ ಕಲಾಂ ಆಜಾದ್ ಭವನ, ಮಿಲ್ಲರ್ ಟ್ಯಾಂಕ್‍ಬೆಡ್ ರಸ್ತೆ, ವಸಂತನಗರ, ಬೆಂಗಳೂರು 560052 ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ www.dom.karnataka.gov.in/dakshina_kannada/public  ವೆಬ್‍ಸೈಟ್   ಹಾಗೂ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Karnataka Minority welfare Dept. Karnataka Pre metric Scholarships 2023-24 details in Kannada 

Ads on article

Advertise in articles 1

advertising articles 2

Advertise under the article