ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲೆಯ ನೂತನ ಸಭಾಂಗಣ ನಿರ್ಮಾಣಕ್ಕೆ ಶಿಲಾನ್ಯಾಸ

ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲೆಯ ನೂತನ ಸಭಾಂಗಣ ನಿರ್ಮಾಣಕ್ಕೆ ಶಿಲಾನ್ಯಾಸ


ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲೆಯ ನೂತನ ಸಭಾಂಗಣ ನಿರ್ಮಾಣಕ್ಕೆ ಶಿಲಾನ್ಯಾಸ

ಪುತ್ತೂರು:  ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲೆಯ ಆವರಣದಲ್ಲಿ ಇತ್ತೀಚೆಗೆ ನೂತನ ಸಭಾಂಗಣ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿತು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಶಿಲಾನ್ಯಾಸ ನೆರವೇರಿಸಿದರು.

ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯು 109 ವರ್ಷಗಳ ಇತಿಹಾಸ ಇರುವ ಪಾರಂಪರಿಕ ಕಟ್ಟಡದಲ್ಲಿದ್ದು, ಪುತ್ತೂರಿನ ಅಸ್ಮಿತೆಯ ಒಂದು ಭಾಗವಾಗಿ ಉಳಿದಿದೆ. ಈ ಶಾಲೆಯ ಆವರಣದಲ್ಲಿ ನಿರ್ಮಾಣವಾಗುವ ನೂತನ ಸಭಾಂಗಣ ನಿರ್ಮಾಣಕ್ಕೆ 1.25 ಕೋಟಿ ರೂಪಾಯಿ ವೆಚ್ಚ ಅಂದಾಜಿಸಲಾಗಿದ್ದು, ಇದಕ್ಕೆ ಹಣದ ಕೊರತೆ ಎದುರಾದರೆ ಶಾಸಕರ ನಿಧಿಯಿಂದ ಅನುದಾನ ಒದಗಿಸುವುದಾಗಿ ಶಾಸಕ ಅಶೋಕ್ ಕುಮಾರ್ ರೈ ಇದೇ ವೇಳೆ ಭರವಸೆ ನೀಡಿದರು.   

ಕೊಂಬೆಟ್ಟು ಜ್ಯೂನಿಯರ್ ಕಾಲೇಜು ರಾಜಮಾದರಿಯ ಶಾಲೆ. ಶಾಲೆಯಲ್ಲೇ ನಾನು ವಿದ್ಯಾರ್ಥಿಯಾಗಿದ್ದೆ. ಶಾಲಾ ಅಭಿವೃದ್ಧಿಗಾಗಿ ಕಾಲೇಜಿನ ಕಾರ್ಯಾಧ್ಯಕ್ಷ ಪ್ರಸಾದ್ಕೌಶಲ್ ಶೆಟ್ಟಿ ಮತ್ತು ಪ್ರೌಢಶಾಲೆಯ ಕಾರ್ಯಾಧ್ಯಕ್ಷ ಜೋಕಿಂ ಡಿಸೋಜ ಪ್ರಯತ್ನ ಪಡುತ್ತಿದ್ದಾರೆ. ಹಿಂದೆ ನಗರಸಭೆ ಸ್ಥಳೀಯ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್ ಅವರ ನೇತೃತ್ವದಲ್ಲಿ ಪ್ರೌಢಶಾಲೆಯ ಪುನರ್ನವೀಕರಣ ಕಾರ್ಯ ನಡೆಯಿತು. ಆದರೆ ರಾಜ ಮಾದರಿಯ ಶಾಲೆ ಪುತ್ತೂರಿನಲ್ಲಿ ಇರುವುದು ಕೊಂಬೆಟ್ಟಿನ ಜ್ಯೂನಿಯರ್ ಕಾಲೇಜು ಪ್ರೌಢಶಾಲೆ ಎಂದು ಹೇಳಲು ನನಗೆ ಹೆಮ್ಮೆಯಾಗುತ್ತದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಶಾಲೆಯ ಆವರಣದಲ್ಲಿ ದೊಡ್ಡ ಸಭಾಂಗಣ ಬೇಕು ಎಂಬ ಬೇಡಿಕೆಯ ಬಲವಾಗಿತ್ತು. ಎಮ್‌ಆರ್‌ಪಿಎಲ್ ಅವರ ಸಿಎಸ್‌ಆರ್ ಫಂಡ್ ಮೂಲಕ ಪುತ್ತೂರಿನ ಎರಡು ಶಾಲೆಗಳಿಗೆ  2 ಕೋಟಿ ರೂಪಾಯಿ ಅನುದಾನ ಕೇಳಿದ್ದೆ. ಅದರಲ್ಲಿ ಹಾರಾಡಿ ಶಾಲೆಗೆ ರೂ. 1 ಕೋಟಿ, ಜ್ಯೂನಿಯರ್ ಕಾಲೇಜು ಸಭಾಂಗಣಕ್ಕೆ ರೂ. 40ಲಕ್ಷ ಬಿಡುಗಡೆ ಮಾಡಿದ್ದು, ಇನ್ನು ರೂ. 40 ಲಕ್ಷವನ್ನು ಮುಂದಿನ ಆರ್ಥಿಕ ವರ್ಷದಲ್ಲಿ ಬಿಡುಗಡೆ ಮಾಡುತ್ತಾರೆ. ಅದೆ ರೀತಿ ಇತರ ಶಾಲೆಗಳಿಗೆ ರೂ.1.50 ಕೋಟಿ ಅನುದಾನ ಕೊಟ್ಟಿದ್ದಾರೆ ಎಂದರು.

ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾರ್ಯಾಧ್ಯಕ್ಷ ಪ್ರಸಾದ್‌ ಕೌಶಲ್ ಶೆಟ್ಟಿ, ಪ್ರೌಢಶಾಲೆ ವಿಭಾಗದ ಕಾರ್ಯಾಧ್ಯಕ್ಷ ಜೋಕಿಂ ಡಿಸೋಜಾ, ನಗರಸಭೆ ಸ್ಥಳೀಯ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್, ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ವಸಂತ ಮೂಲ್ಯ, ಕಾಲೇಜಿನ ಪ್ರಾಂಶುಪಾಲ ಗೋಪಾಲ ಗೌಡ, ಹಿರಿಯ ಶಿಕ್ಷಕ ಕೋಟಿಯಪ್ಪ ಪೂಜಾರಿ, ಎಸ್‌ಡಿಎಂಸಿ ಸದಸ್ಯರು ಸಹಿತ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Puttur Kombettu Govt PU College's new auditorium foundation stone was laid by MLA Ashok Kumar Rai 

Keywords

Kombettu Govt PU College, Puttur, Puttur News, Kombettu Govt PU College's new auditorium, MLA Ashok Kumar Rai, ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲೆ, ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಪುತ್ತೂರು ಸುದ್ದಿ, ಪುತ್ತೂರು ನ್ಯೂಸ್, ಸಿಟಿಜೆನ್ ನ್ಯೂಸ್ ಪುತ್ತೂರು, 


Ads on article

Advertise in articles 1

advertising articles 2

Advertise under the article